ಸೆನ್ಸೆಕ್ಸ್: 161 ಪಾಯಿಂಟ್‌ಗಳ ಏರಿಕೆ ಕಂಡ ಶೇರುಪೇಟೆ ಸೂಚ್ಯಂಕ

ಶುಕ್ರವಾರ, 28 ಆಗಸ್ಟ್ 2015 (19:03 IST)
ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 161 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 517 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 161.19 ಪಾಯಿಂಟ್‌ಗಳ ಏರಿಕೆ ಕಂಡು 26,392.38 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 53 ಪಾಯಿಂಟ್‌ಗಳ ಏರಿಕೆ ಕಂಡು 8,001.95 ಅಂಕಗಳಿಗೆ ತಲುಪಿದೆ. 
 
ಒಎನ್‌ಜಿಸಿ, ಭಾರ್ತಿ ಏರ್‌ಟೆಲ್, ಸನ್ ಫಾರ್ಮಾ, ಲುಪಿನ್, ಕೋಲ್ ಇಂಡಿಯಾ, ಟಿಸಿಎಸ್, ಎಲ್‌ಆಂಡ್‌ಟಿ ಮತ್ತು ಬಜಾಜ್ ಅಟೋ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಭಾರಿ ಚೇತರಿಕೆ ಕಂಡಿವೆ.

ವೆಬ್ದುನಿಯಾವನ್ನು ಓದಿ