ಸೆನ್ಸೆಕ್ಸ್: ಭರ್ಜರಿ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

ಶುಕ್ರವಾರ, 28 ಆಗಸ್ಟ್ 2015 (14:34 IST)
ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 350 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಹಿಂದಿನ  ದಿನದ ವಹಿವಾಟಿನ ಮುಕ್ತಾಯಕ್ಕೆ 516.53 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ,ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 350.94 ಪಾಯಿಂಟ್‌ಗಳ ಏರಿಕೆ ಕಂಡು 26,582.13 ಅಂಕಗಳಿಗೆ ತಲುಪಿದೆ. 
 
ರಿಯಲ್ಟಿ, ಉಕ್ಕು, ಐಟಿ ಮತ್ತು ತೈಲ ಹಾಗೂ ಅನಿಲ ಕ್ಷೇತ್ರದ ಶೇರುಗಳ ಖರೀದಿಯಲ್ಲಿ ಹೆಚ್ಚಳವಾಗಿದ್ದರಿಂದ ಶೇರುಪೇಟೆಯ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 113.00 ಪಾಯಿಂಟ್‌ಗಳ ಏರಿಕೆ ಕಂಡು 8,061.95 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಶೇರುಪೇಟೆ ಶೇ.2.77 ರಷ್ಟು ಏರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಶೇ.1.66 ರಷ್ಟು ಚೇತರಿಕೆಯಾಗಿದೆ.
 

ವೆಬ್ದುನಿಯಾವನ್ನು ಓದಿ