ಸೆನ್ಸೆಕ್ಸ್ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

ಗುರುವಾರ, 27 ಆಗಸ್ಟ್ 2015 (14:26 IST)
ತಿಂಗಳ ಕೊನೆಯ ವಾರದಲ್ಲಿಯೂ ಮಧ್ಯೆಯೂ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ಭರ್ಜರಿ ವಹಿವಾಟಿನಲ್ಲಿ 455 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 317.72 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 455.73 ಪಾಯಿಂಟ್‌ಗಳ ಏರಿಕೆ ಕಂಡು 26,170.39 ಅಂಕಗಳಿಗೆ ತಲುಪಿದೆ.
 
ರಿಯಲ್ಟಿ, ಹೆಲ್ತ್‌ಕೇರ್, ವಾಹನೋದ್ಯಮ, ಉಕ್ಕು, ಬ್ಯಾಂಕಿಂಗ್, ಬಂಡವಾಳ ವಸ್ತುಗಳು, ತೈಲ ಮತ್ತು ಅನಿಲ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 138.95 ಪಾಯಿಂಟ್‌ಗಳ ಏರಿಕೆ ಕಂಡು 7,930.80 ಅಂಕಗಳಿಗೆ ತಲುಪಿದೆ.
 
ಮಾಸಾಂತ್ಯದ ಮಧ್ಯೆಯೂ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ್ ಶೇ..1.12 ರಷ್ಟು ಚೇತರಿಕೆ ಕಂಡಿದ್ದರೆ ಜಪಾನ್‌ನ ನಿಕೈ ಶೇರುಪೇಟೆ ಶೇ.1.89 ರಷ್ಟು ಏರಿಕೆ ಕಂಡಿದೆ.

ವೆಬ್ದುನಿಯಾವನ್ನು ಓದಿ