ವಿದೇಶಿ ಬಂಡವಾಳದ ಒಳಹರಿವಿನಿಂದ ಸಂವೇದಿ ಸೂಚ್ಯಂಕ ಚೇತರಿಕೆ

ಗುರುವಾರ, 21 ಜುಲೈ 2016 (12:15 IST)
ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 73 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಹಿಂದಿನ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 169.23 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 72.87 ಪಾಯಿಂಟ್‌ಗಳ ಏರಿಕೆ ಕಂಡು 27,988.76 ಅಂಕಗಳಿಗೆ ತಲುಪಿದೆ.
 
ತೈಲ ಮತ್ತು ಅನಿಲ, ಹೆಲ್ತ್‌ಕೇರ್, ಪಿಎಸ್‌ಯು, ಗೃಹೋಪಕರಣ ವಸ್ತುಗಳು, ಎಫ್‌ಎಂಸಿಜಿ ಮತ್ತು ವಾಹನೋದ್ಯಮ ಶೇರುಗಳು ವಹಿವಾಟಿನಲ್ಲಿ ಭರ್ಜರಿ ಚೇತರಿಕೆ ಕಂಡಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 19.40 ಪಾಯಿಂಟ್‌ಗಳ ಏರಿಕೆ ಕಂಡು 8,585.25 ಅಂಕಗಳಿಗೆ ತಲುಪಿದೆ.
 
ಕಾರ್ಪೋರೇಟ್ ಕಂಪೆನಿಗಳ ತ್ರೈಮಾಸಿಕ ಫಲಿತಾಂಶ, ವಿದೇಶಿ ಬಂಡವಾಳದ ಒಳಹರಿವು, ಜಿಎಸ್‌ಟಿ ಮಸೂದೆ ಅಂಗೀಕಾರವಾಗುವ ನಿರೀಕ್ಷೆಗಳಿಂದಾಗಿ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.1.05 ರಷ್ಟು ಚೇತರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.72 ರಷ್ಟು ಏರಿಕೆ ಕಂಡಿದೆ. ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ಶೇ.0.19 ರಷ್ಟು ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ