ಸೆನ್ಸೆಕ್ಸ್: ಪಾತಾಳಕ್ಕೆ ಕುಸಿದ ಶೇರುಪೇಟೆ ಸಂವೇದಿ ಸೂಚ್ಯಂಕ

ಶುಕ್ರವಾರ, 29 ಜುಲೈ 2016 (18:59 IST)
ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟು ಮತ್ತು ಹೂಡಿಕೆದಾರರು ಲಾಭದಾಯಕ ವಹಿವಾಟಿಗೆ ಮೊರೆಹೋಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 157 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ವಾರಾತ್ಯಂದ ಆಧಾರದ ಅನ್ವಯ ಬಿಎಸ್‌ಇ ಸೂಚ್ಯಂಕ 248.62 ಪಾಯಿಂಟ್‌ಗಳ ಏರಿಕೆ ಕಂಡಿದ್ದರೆ, ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 97.30 ಪಾಯಿಂಟ್‌ಗಳ ಏರಿಕೆ ಕಂಡಿದೆ.  
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 156.76 ಪಾಯಿಂಟ್‌ಗಳ ಕುಸಿತ ಕಂಡು 28,051.86 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.27.80 ಪಾಯಿಂಟ್‌ಗಳ ಇಳಿಕೆ ಕಂಡು 8,638.50 ಅಂಕಗಳಿಗೆ ತಲುಪಿದೆ. 
 
ಜಪಾನ್‌ನ ನಿಕೈ ಸೂಚ್ಯಂಕ ಶೇ.0.56 ರಷ್ಟು ಚೇತರಿಕೆ ಕಂಡಿದ್ದರೆ, ಚೀನಾ, ಹಾಂಗ್‌ಕಾಂಗ್‌, ಸಿಂಗಾಪೂರ್, ದಕ್ಷಿಣ ಕೊರಿಯಾ ಮತ್ತು ತೈವಾನ್ ಶೇರುಪೇಟೆಗಳು ವಹಿವಾಟಿನ ಮುಕ್ತಾಯಕ್ಕೆ ಶೇ.1.71 ರಷ್ಟು ಇಳಿಕೆ ಕಂಡಿದೆ. 
 
ಫ್ರಾನ್ಸ್ ಮತ್ತು ಯುಕೆ ಶೇರುಗಳು ಶೇ.0.24 ರಷ್ಟು ಕುಸಿತ ಕಂಡಿದ್ದರೆ, ಜರ್ಮನಿ ಶೇರುಪೇಟೆ ಶೇ.0.43 ರಷ್ಟು ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ