ಸೆನ್ಸೆಕ್ಸ್: ಪಾತಾಳಕ್ಕೆ ಕುಸಿದ ಶೇರುಪೇಟೆ ಸಂವೇದಿ ಸೂಚ್ಯಂಕ

ಗುರುವಾರ, 25 ಆಗಸ್ಟ್ 2016 (18:28 IST)
ಅಮೆರಿಕದ ರಿಸರ್ವ್ ಬ್ಯಾಂಕ್ ರೆಪೋ ದರಗಳಲ್ಲಿ ಇಳಿಕೆ ಘೋಷಿಸಲಿದೆಯೇ ಎನ್ನುವ ಕಳವಳದಿಂದಾಗಿ ಹೂಡಿಕೆದಾರರು ಶೇರುಗಳ ಖರೀದಿಗೆ ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 224 ಪಾಯಿಂಟ್‌ಗಳ ಭಾರಿ ಕುಸಿತ ಕಂಡಿದೆ.
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 224.03 ಪಾಯಿಂಟ್‌ಗಳ ಕುಸಿತ ಕಂಡು 27,803.24 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 74.10 ಪಾಯಿಂಟ್‌ಗಳ ಕುಸಿತ ಕಂಡು 8,600 ಅಂಕಗಳಿಗಿಂತ ಕೆಳಗೆ ಕುಸಿದಿದೆ. 
 
ಉಕ್ಕು, ತಂತ್ರಜ್ಞಾನ, ಐಟಿ, ಗೃಹೋಪಕರಣ ವಸ್ತುಗಳು, ವಾಹನೋದ್ಯಮ ಮತ್ತು  ರಿಯಲ್ಟಿ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ. 
 
ಆದಾನಿ ಪೋರ್ಟ್ಸ್, ವಿಪ್ರೋ, ಟಾಟಾ ಸ್ಟೀಲ್, ಇನ್ಫೋಸಿಸ್, ಎಚ್‌ಡಿಎಫ್‌ಸಿ, ಭಾರ್ತಿ ಏರ್‌ಟೆಲ್, ಎಸ್‌ಬಿಐ, ಎನ್‌‌ಟಿಪಿಸಿ ಮತ್ತು ಮಹೀಂದ್ರಾ ಆಂಡ್ ಮಹೀಂದ್ರಾ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.
 
ಏತನ್ಮಧ್ಯೆ, ಗೇಲ್, ಐಟಿಸಿ, ಎಕ್ಸಿಸ್ ಬ್ಯಾಂಕ್, ಡಾ.ರೆಡ್ಡಿ ಶೇರುಗಳು ವಹಿವಾಟಿನ ಮುಕ್ತಾಯಕ್ಕೆ ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಚೀನಾ, ಜಪಾನ್ ಶೇರುಪೇಟೆಗಳು ವಹಿವಾಟಿನ ಮುಕ್ತಾಯಕ್ಕೆ ಶೇ.0.57 ರಷ್ಟು ಏರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.03 ರಷ್ಟು ಚೇತರಿಕೆ ಕಂಡಿದೆ.
 
ಯುರೋಪ್ ಶೇರುಪೇಟೆಗಳಾದ ಫ್ರಾನ್ಸ್, ಜರ್ಮನಿ ಮತ್ತು ಇಂಗ್ಲೆಂಡ್ ಶೇರುಪೇಟೆಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ