ಎಫ್‌ಎಂಸಿಜಿ, ಬಂಡವಾಳ ವಸ್ತುಗಳು, ತೈಲ ಮತ್ತು ಅನಿಲ ಮತ್ತು ಹೆಲ್ತ್‌ಕೇರ್ ಶೇರುಗಳ ಖರೀದಿಗೆ ಹೂಡಿಕೆದಾರರು ನಿರಾಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 45.97 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 54.87 ಪಾಯಿಂಟ್‌ಗಳ ಕುಸಿತ ಕಂಡು 26,659.06 ಅಂಕಗಳಿಗೆ ತಲುಪಿದೆ.
ಜಪಾನ್‌ನ ನಿಕೈ ಶೇರುಪೇಟೆ ಶೇ.2.29 ರಷ್ಟು ಕುಸಿತ ಕಂಡಿದ್ದರೆ, ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.22 ರಷ್ಟು ಕುಸಿತ ಕಂಡಿದೆ. ಆದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.03 ರಷ್ಟು ಚೇತರಿಕೆ ಕಂಡಿದೆ.