ಸೆನ್ಸೆಕ್ಸ್: 38 ಪಾಯಿಂಟ್‌ಗಳ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ
ಮಂಗಳವಾರ, 24 ಮೇ 2016 (10:40 IST)
ಅಮೆರಿಕದ ರಿಸರ್ವ್ ಬ್ಯಾಂಕ್ ರೆಪೋ ದರಗಳ ಏರಿಕೆಗೊಳಿಸುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಗಳ ದುರ್ಬಲಪ ವಹಿವಾಟಿನಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 38 ಪಾಯಿಂಟ್‌ಗಳ ಕುಸಿತ ಕಂಡಿದೆ.
ಕಳೆದ ನಾಲ್ಕು ದಿನಗಳ ಅವಧಿಯಲ್ಲಿ 549 ಪಾಯಿಂಟ್‌ಗಳ ಕುಸಿತ ಕಂಡಿದ್ದ ಶೇರುಪೇಟೆ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 37.94 ಪಾಯಿಂಟ್‌ಗಳ ಇಳಿಕೆ ಕಂಡು 25,192.42 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 15.25 ಪಾಯಿಂಟ್‌ಗಳ ಕುಸಿತ ಕಂಡು 7,715.80 ಅಂಕಗಳಿಗೆ ತಲುಪಿದೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.38 ರಷ್ಟು ಕುಸಿತ ಕಂಡಿದೆ. ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.67 ರಷ್ಟು ಕುಸಿತ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಕೂಡಾ ಶೇ.0.92 ರಷ್ಟು ಇಳಿಕೆ ಕಂಡಿದೆ.
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.0.5 ರಷ್ಟು ಇಳಿಕೆಯೊಂದಿಗೆ ಅಂತ್ಯವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.