ಸೆನ್ಸೆಕ್ಸ್: 48 ಪಾಯಿಂಟ್‌ಗಳ ಅಲ್ಪ ಚೇತರಿಕೆ ಕಂಡ ಶೇರುಸೂಚ್ಯಂಕ

ಬುಧವಾರ, 27 ಜುಲೈ 2016 (20:33 IST)
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಜಿಎಸ್‌ಟಿ ಮಸೂದೆ ಅಂಗೀಕಾರವಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 48 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.  
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 47.81 ಪಾಯಿಂಟ್‌ಗಳ ಏರಿಕೆ ಕಂಡು 28,024.33 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 25.15 ಪಾಯಿಂಟ್‌ಗಳ ಏರಿಕೆ ಕಂಡು 8,615.80 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಸೂಚ್ಯಂಕ ಶೇ.1.72 ರಷ್ಟು ಏರಿಕೆ ಕಂಡಿದ್ದರೆ ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್, ಸಿಂಗಾಪೂರ್ ಮತ್ತು ತೈವಾನ್ ಶೇರುಪೇಟೆಗಳು ಶೇ.0.43 ರಷ್ಟು ಏರಿಕೆ ಕಂಡಿವೆ.
 
ಫ್ರಾನ್ಸ್, ಜರ್ಮನಿ ಮತ್ತು ಯುಕೆ ಶೇರುಪೇಟೆಗಳು ಶೇ.0.28 ರಿಂದ ಶೇ.1.44 ರಷ್ಟು ಚೇತರಿಕೆ ಕಂಡಿವೆ.  
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ