ಸೆನ್ಸೆಕ್ಸ್: 93 ಪಾಯಿಂಟ್‌ಗಳ ಅಲ್ಪ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

ಶುಕ್ರವಾರ, 22 ಜುಲೈ 2016 (18:42 IST)
ಹೂಡಿಕೆದಾರರು ಕೆಲ ಆಯ್ದ ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 93 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ವಿದೇಶಿ ಬಂಡವಾಳದ ಒಳಹರಿವು ನಿಧಾನಗತಿಯಲ್ಲಿ ಸಾಗಿದ್ದರಿಂದ ಸೂಚ್ಯಂಕ ಅಲ್ಪ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ. 
 
ಕಾರ್ಪೋರೇಟ್ ಕಂಪೆನಿಗಳ ತ್ರೈಮಾಸಿಕ ಫಲಿತಾಂಶ ಚೇತರಿಕೆ ಹಾಗೂ ಬ್ಲ್ಯೂ-ಚಿಪ್ ಶೇರುಗಳ ಖರೀದಿಗೆ ಹೂಡಿಕೆದಾರರ ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 92.72 ಪಾಯಿಂಟ್‌ಗಳ ಏರಿಕೆ ಕಂಡು 27,721.72 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 31.10 ಪಾಯಿಂಟ್‌ಗಳ ಏರಿಕೆ ಕಂಡು 8,548.95 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.1.09 ರಷ್ಟು ಕುಸಿತಗೊಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.16 ರಷ್ಟು ಇಳಿಕೆ ಕಂಡಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ