ಸೆನ್ಸೆಕ್ಸ್: 122 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಸೂಚ್ಯಂಕ

ಮಂಗಳವಾರ, 7 ಜುಲೈ 2015 (14:22 IST)
ಸತತ ಮೂರನೇ ದಿನವೂ ಶೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡಿದೆ. ಏಷ್ಯಾ ಮಾರುಕಟ್ಟೆಗಳ ಚೇತರಿಕೆ ವಹಿವಾಟಿನ ಪ್ರಭಾವ ದೇಶಿಯ ಶೇರುಪೇಟೆಗೆ ಬೀರಿದ್ದರಿಂದ ಇಂದಿನ ಆರಂಭಿಕ ವಹಿವಾಟಿನಲ್ಲಿ 122 ಪಾಯಿಂಟ್‌ಗಳ ಭರ್ಜರಿ ಏರಿಕೆ ಕಂಡಿದೆ.
 
ಕಳೆದ ಎರಡು ದಿನಗಳ ವಹಿವಾಟಿನಲ್ಲಿ 262.96 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 122.04 ಪಾಯಿಂಟ್‌ಗಳ ಏರಿಕೆ ಕಂಡು 28,330.80 ಅಂಕಗಳಿಗೆ ತಲುಪಿದೆ.
 
ಎಚ್‌ಡಿಎಫ್‌ಸಿ, ಏಕ್ಸಿಸ್ ಬ್ಯಾಂಕ್, ವಿಪ್ರೋ, ಟಾಟಾ ಸ್ಟೀಲ್, ಎಸ್‌ಬಿಐ, ಐಸಿಐಸಿಐ ಬ್ಯಾಂಕ್, ಟಾಟಾ ಮೋಟಾರ್ಸ್, ಕೋಲ್ ಇಂಡಿಯಾ, ಮಹೀಂದ್ರಾ ಆಂಡ್ ಮಹೀಂದ್ರಾ, ಬಜಾಜ್ ಅಟೋ ಮಾರುತಿ ಸುಜುಕಿ ಮತ್ತು ಎನ್‌ಟಿಪಿಸಿ ಶೇರುಗಳು ವಹಿವಾಟಿನಲ್ಲಿ ಭಾರಿ ಚೇತರಿಕೆಯಾಗಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 32.75 ಪಾಯಿಂಟ್‌ಗಳ ಏರಿಕೆ ಕಂಡು 8,554.90 ಅಂಕಗಳಿಗೆ ತಲುಪಿದೆ.
 
ಗ್ರೀಸ್ ದೇಶದ ಆರ್ಥಿಕ ಬಿಕ್ಕಟ್ಟು ದೇಶದ ಆರ್ಥಿಕತೆಯ ಮೇಲೆ ಪ್ರಭಾವ ಬೀರದಿರುವುದು ಮತ್ತು ರಿಸರ್ವ್ ಬ್ಯಾಂಕ್ ರೆಪೋ ದರಗಳ ಕಡಿತ ಘೋಷಿಸುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಜಪಾನ್‌ನ ನಿಕೈ ಶೇರುಪೇಟೆ ಶೇ.1.36 ರಷ್ಟು ಚೇತರಿಕೆ ಕಂಡಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಕೂಡಾ ಶೇ.0.62 ರಷ್ಟು ಏರಿಕೆ ಕಂಡಿದೆ.
 

ವೆಬ್ದುನಿಯಾವನ್ನು ಓದಿ