ದೀಪಾವಳಿ ಧಮಾಕಾ: ಭರ್ಜರಿ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

ಬುಧವಾರ, 22 ಅಕ್ಟೋಬರ್ 2014 (12:59 IST)
ಕೇಂದ್ರ ಸರಕಾರದ ಆರ್ಥಿಕ ನೀತಿ ಸುಧಾರಣೆ ಮತ್ತು ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 212 ಪಾಯಿಂಟ್‌ಗಳ ಭರ್ಜರಿ ಏರಿಕೆ ಕಂಡಿದೆ.
 
ಸಾಗರೋತ್ತರ ಮಾರುಕಟ್ಟೆಗಳ ಚೇತರಿಕೆಯ ವಹಿವಾಟು ಕೂಡಾ ಮಾರುಕಟ್ಟೆಗೆ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 576.31 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 212.76 ಪಾಯಿಂಟ್‌ಗಳ ಏರಿಕೆ ಕಂಡು 26,788.41 ಅಂಕಗಳಿಗೆ ತಲುಪಿದೆ.
 
ವಾಹನೋದ್ಯಮ, ಬಂಡವಾಳ ವಸ್ತುಗಳು, ಹೆಲ್ತ್‌ಕೇರ್, ವಿದ್ಯುತ್ ಮತ್ತು ಉಕ್ಕು ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಭರ್ಜರಿ ಲಾಭ ಗಳಿಸಿವೆ.
 
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 60.45 ಪಾಯಿಂಟ್‌ಗಳ ಏರಿಕೆ ಕಂಡು 7988.20 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.92 ರಷ್ಟು ಏರಿಕೆಯಾಗಿದೆ. ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಶೇ. 2 ರಷ್ಟು ಚೇತರಿಕೆ ಕಂಡಿದೆ.
 
 
 

ವೆಬ್ದುನಿಯಾವನ್ನು ಓದಿ