ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

ಗುರುವಾರ, 27 ನವೆಂಬರ್ 2014 (13:46 IST)
ಏಷ್ಯಾ ಮಾರುಕಟ್ಟೆಗಳ ಮಿಶ್ರ ವಹಿವಾಟಿನ ಮಧ್ಯೆಯೂ ಬ್ಲ್ಯೂ-ಚಿಪ್ ಶೇರುಗಳ ವಹಿವಾಟು ಚೇತರಿಕೆ ಕಂಡಿದ್ದರಿಂದ ಸಂವೇದಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಅಲ್ಪ 37 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
 
ಹಿಂದಿನ ದಿನದ ತೊಳಲಾಟದ ವಹಿವಾಟಿನ ಮುಕ್ತಾಯಕ್ಕೆ 48.14 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 37.75 ಪಾಯಂಟ್‌ಗಳ ಏರಿಕೆ ಕಂಡು 28,423.94 ಅಂಕಗಳಿಗೆ ತಲುಪಿದೆ.
 
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.12.80 ಪಾಯಿಂಟ್‌ಗಳ ಚೇತರಿಕೆ ಕಂಡು 8488.55 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.45 ರಷ್ಟು ಏರಿಕೆಯಾಗಿದೆ. ಆದರೆ, ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಶೇ0.42 ರಷ್ಟು ಕುಸಿತ ಕಂಡಿದೆ.
 
 
 

ವೆಬ್ದುನಿಯಾವನ್ನು ಓದಿ