ಸೆನ್ಸೆಕ್ಸ್: 59 ಪಾಯಿಂಟ್‌ಗಳ ಕುಸಿತ ಕಂಡ ಶೇರುಸೂಚ್ಯಂಕ

ಬುಧವಾರ, 17 ಆಗಸ್ಟ್ 2016 (20:49 IST)
ಸತತ ಎರಡನೇ ದಿನವೂ ಕುಸಿತದ ಪಯಣವನ್ನು ಮುಂದುವರಿಸಿರುವ ಶೇರುಪೇಟೆ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ ಮತ್ತೆ 59 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಐಟಿ, ತೈಲ ಮತ್ತು ಅನಿಲ, ಫಾರ್ಮಾ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ. 
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 87.79 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ ಮತ್ತೆ 59.24 ಪಾಯಿಂಟ್‌ಗಳ ಕುಸಿತ ಕಂಡು 28,061.79 ಅಂಕಗಳಿಗೆ ತಲುಪಿದೆ.  
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 18.50 ಪಾಯಿಂಟ್‌ಗಳ ಕುಸಿತ ಕಂಡು 8,624.05 ಅಂಕಗಳಿಗೆ ತಲುಪಿದೆ.
 
ಏಷ್ಯಾದ ಮಾರುಕಟ್ಟೆಗಳಾದ ಚೀನಾ, ಹಾಂಗ್‌ಕಾಂಗ್, ಸಿಂಗಾಪೂರ್, ದಕ್ಷಿಣ ಕೊರಿಯಾ ಶೇರುಪೇಟೆಗಳು ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.0.02 ರಿಂದ ಶೇ.0.54 ರ ವರೆಗೆ ಕುಸಿತ ಕಂಡಿವೆ. ಯುರೋಪ್‌ನ ಫ್ರಾನ್ಸ್, ಜರ್ಮನಿ ಮತ್ತು ಯುಕೆ ರಾಷ್ಟ್ರಗಳ ಶೇರುಪೇಟೆಗಳು ಕೂಡಾ ಶೇ.0.68 ರಷ್ಟು ಕುಸಿತ ಕಂಡಿವೆ.
 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ