ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

ಗುರುವಾರ, 30 ಅಕ್ಟೋಬರ್ 2014 (13:46 IST)
ಏಷ್ಯಾ ಮಾರುಕಟ್ಟೆಗಳ ಮಿಶ್ರವಹಿವಾಟಿನ ಮಧ್ಯೆಯೂ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 48 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಮಾಸಾಂತ್ಯ ಮತ್ತು ಬ್ಲ್ಯೂಚಿಪ್ ಶೇರುಗಳ ಮಾರಾಟದಲ್ಲಿ ಹೆಚ್ಚಳವಾಗಿದ್ದರಿಂದ ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 48.27 ಪಾಯಿಂಟ್‌ಗಳ ಏರಿಕೆ ಕಂಡು 27,146.44 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 12.10 ಪಾಯಿಂಟ್‌ಗಳ ಏರಿಕೆ ಕಂಡು 8102.55 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಶೇ.0.27 ರಷ್ಟು ಚೇತರಿಕೆ ಕಂಡಿದೆ. ಆದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.33 ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. 
 
 
 

ವೆಬ್ದುನಿಯಾವನ್ನು ಓದಿ