ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟು: ಕುಸಿದ ಶೇರುಪೇಟೆ ಸೂಚ್ಯಂಕ

ಮಂಗಳವಾರ, 23 ಆಗಸ್ಟ್ 2016 (13:49 IST)
ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನ ಪ್ರಭಾವ ದೇಶಿಯ ಶೇರುಪೇಟೆ ಮೇಲೆ ಬೀರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 46 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಬಂಡವಾಳ ವಸ್ತುಗಳು, ಉಕ್ಕು, ಹೆಲ್ತ್‌ಕೇರ್, ಪಿಎಸ್‌ಯು ಮತ್ತು ವಿದ್ಯುತ್ ಕ್ಷೇತ್ರಗಳ ಶೇರುಗಳ ಮಾರಾಟಕ್ಕೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 138 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 45.55 ಪಾಯಿಂಟ್‌ಗಳ ಕುಸಿತ ಕಂಡು 27,939.99 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 17.75 ಪಾಯಿಂಟ್‌ಗಳ ಕುಸಿತ ಕಂಡು  8611.40 ಅಂಕಗಳಿಗೆ ತಲುಪಿದೆ. 
 
ಏಷ್ಯಾ ಮಾರುಕಟ್ಟೆಗಳಲ್ಲಿ ಜಪಾನ್‌ನ ನಿಕೈ ಶೇರುಸೂಚ್ಯಂಕ ಶೇ.0.22 ರಷ್ಟು ಕುಸಿತ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್‌ ಸೂಚ್ಯಂಕ ಶೇ.0.37 ರಷ್ಟು ಇಳಿಕೆ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಕೂಡಾ ಶೇ.0.11 ರಷ್ಟು ಕುಸಿತ ಕಂಡಿದೆ. 
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ0.12 ರಷ್ಟು ಇಳಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ