ಸೆನ್ಸೆಕ್ಸ್: ಲಾಭದಾಯಕ ವಹಿವಾಟಿನಿಂದ ಸೂಚ್ಯಂಕ ಕುಸಿತ

ಸೋಮವಾರ, 29 ಸೆಪ್ಟಂಬರ್ 2014 (11:45 IST)
ಏಷ್ಯಾ ಮಾರುಕಟ್ಟೆಗಳ ಮಿಶ್ರವಹಿವಾಟಿನ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 82 ಪಾಯಿಂಟ್‌ಗಳ ಕುಸಿತ ಕಂಡು 26,544.21 ಅಂಕಗಳಿಗೆ ತಲುಪಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 157.96 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 82.11 ಪಾಯಿಂಟ್‌ಗಳ ಕುಸಿತ ಕಂಡು 26,544.21 ಅಂಕಗಳಿಗೆ ತಲುಪಿದೆ.
 
ಉಕ್ಕು, ಪಿಎಸ್‌ಯು, ಬಂಡವಾಳ ವಸ್ತುಗಳು, ಎಫ್‌ಎಂಸಿಜಿ, ವಾಹನೋದ್ಯಮ ಮತ್ತು ತೈಲ ಹಾಗೂ ಅನಿಲ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 29.75 ಪಾಯಿಂಟ್‌ಗಳ ಇಳಿಕೆ ಕಂಡು 7939.10 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.18 ರಷ್ಟು ಕುಸಿತ ಕಂಡಿದೆ.ಆದರೆ, ಜಪಾನ್‌ನ ನಿಕೈ ಸೂಚ್ಯಂಕ ಶೇ.0.67 ರಷ್ಟು ಏರಿಕೆ ಕಂಡಿದೆ.
 
 
 
 

ವೆಬ್ದುನಿಯಾವನ್ನು ಓದಿ