ಸೆನ್ಸೆಕ್ಸ್: 78 ಪಾಯಿಂಟ್‌ಗಳ ಏರಿಕೆ ಕಂಡ ಶೇರುಪೇಟೆ ಸೂಚ್ಯಂಕ
ಗುರುವಾರ, 25 ಆಗಸ್ಟ್ 2016 (11:38 IST)
ಮಾಸಾಂತ್ಯದಿಂದಾಗಿ ಹೂಡಿಕೆದಾರರು ಶೇರುಗಳ ಖರೀದಿಗೆ ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 78 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 74.40 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 77.99 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಎಫ್‌ಎಂಸಿಜಿ, ವಾಹನೋದ್ಯಮ ಮತ್ತು ತೈಲ ಹಾಗೂ ಅನಿಲ ಕ್ಷೇತ್ರಗಳ ಶೇರುಗಳು ಸೇರಿದಂತೆ ಇತರ ಕ್ಷೇತ್ರಗಳು ಕೂಡಾ ಚೇತರಿಕೆಯ ದಾರಿಯಲ್ಲಿ ಸಾಗಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 25.60 ಪಾಯಿಂಟ್‌ಗಳ ಏರಿಕೆ ಕಂಡು 8,675.90 ಅಂಕಗಳಿಗೆ ತಲುಪಿದೆ.
ಸಿಪ್ಲಾ, ಎಕ್ಸಿಸ್ ಬ್ಯಾಂಕ್, ಬಜಾಜ್ ಅಟೋ, ಐಟಿಸಿ ಲಿಮಿಟೆಡ್, ಸನ್ ಫಾರ್ಮಾ, ಹೀರೋ ಮೋಟಾರ್ ಕಾರ್ಪೋರೇಶನ್, ಕೋಲ್ ಇಂಡಿಯಾ, ಟಿಸಿಎಸ್ ಮತ್ತು ಡಾ.ರೆಡ್ಡಿ ಲ್ಯಾಬ್ ಶೇರುಗಳು ವಹಿವಾಟಿನಲ್ಲಿ ಏರಿಕೆ ಕಂಡಿವೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.07 ರಷ್ಟು ಏರಿಕೆ ಕಂಡಿದ್ದರೆ, ಜಪಾನ್‌ನ ನಿಕೈ ಸೂಚ್ಯಂಕ ಶೇ.0.25 ರಷ್ಟು ಇಳಿಕೆಯಾಗಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.1.08 ರಷ್ಟು ಚೇತರಿಕೆ ಕಂಡಿದೆ.
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.35 ಪಾಯಿಂಟ್‌ಗಳ ಕುಸಿತ ಕಂಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ