ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದ ಚೇತರಿಕೆ ಕಂಡ ಸೂಚ್ಯಂಕ

ಶುಕ್ರವಾರ, 19 ಆಗಸ್ಟ್ 2016 (14:36 IST)
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 89 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 117.07 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 88.86 ಪಾಯಿಂಟ್‌ಗಳ ಏರಿಕೆ ಕಂಡು 28,212.30 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 23.35 ಪಾಯಿಂಟ್‌ಗಳ ಕುಸಿತ ಕಂಡು 8,673.25 ಅಂಕಗಳಿಗೆ ತಲುಪಿದೆ.
 
ಏಷ್ಯಾದ ಇತರ ಮಾರುಕಟ್ಟೆಗಳಾದ ಜಪಾನ್‌ನ ನಿಕೈ ಶೇರುಪೇಟೆ ಶೇ.0.07 ರಷ್ಟು ಕುಸಿತ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.27 ರಷ್ಟು ಕುಸಿತ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.13 ರಷ್ಟು ಚೇತರಿಕೆ ಕಂಡಿದೆ.

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ