ಸೆನ್ಸೆಕ್ಸ್: ಅಲ್ಪ ಕುಸಿತ ಕಂಡ ಶೇರುಪೇಟೆ ಸಂವೇದಿ ಸೂಚ್ಯಂಕ

ಮಂಗಳವಾರ, 31 ಮೇ 2016 (20:25 IST)
ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 57.64 ಪಾಯಿಂಟ್‌ಗಳ ಇಳಿಕೆ ಕಂಡು 26667.96 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 18.40 ಪಾಯಿಂಟ್‌ಗಳ ಕುಸಿತ ಕಂಡು 
8160.10 ಅಂಕಗಳಿಗೆ ತಲುಪಿದೆ. 
 
ಟಾಟಾ ಮೋಟಾರ್ಸ್, ಟಾಟಾ ಸ್ಟೀಲ್, ಎಸ್‌ಬಿಐ, ಮಾರುತಿ, ಮತ್ತು ಆದಾನಿ ಪೋರ್ಟ್ಸ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದರೆ, ಸನ್‌ಫಾರ್ಮಾ, ಟಿಸಿಎಸ್, ಗೇಲ್, ಒಎನ್‌ಜಿಸಿ ಮತ್ತು ರಿಲಯನ್ಸ್ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.  
 
ಮಾಸಾಂತ್ಯದ ಹಿನ್ನೆಲೆಯಲ್ಲಿ ಹೂಡಿಕೆದಾರರ ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ