ಸೆನ್ಸೆಕ್ಸ್: ಭರ್ಜರಿ ಚೇತರಿಕೆ ಕಂಡ ಶೇರುಸೂಚ್ಯಂಕ

ಶುಕ್ರವಾರ, 27 ಮಾರ್ಚ್ 2015 (15:05 IST)
ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 236 ಪಾಯಿಂಟ್‌ಗಳ ಭರ್ಜರಿ ಚೇತರಿಕೆ ಕಂಡಿದೆ.

ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 236.83 ಪಾಯಿಂಟ್‌ಗಳ ಏರಿಕೆ ಕಂಡು 27,694.41 ಅಂಕಗಳಿಗೆ ತಲುಪಿದೆ.

ಐಟಿ, ಬಂಡವಾಳ ವಸ್ತುಗಳು, ಬ್ಯಾಂಕಿಂಗ್, ರಿಯಲ್ಟಿ, ಮೂಲಸೌಕರ್ಯ ಕ್ಷೇತ್ರ, ಗೃಹೋಪಕರಣ ವಸ್ತುಗಳು, ಉಕ್ಕು ಮತ್ತು ವಿದ್ಯುತ್ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಲಾಭದತ್ತ ಸಾಗಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ರಾಷ್ಟೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 71.05 ಪಾಯಿಂಟ್‌ಗಳ ಏರಿಕೆ ಕಂಡು 8413.20 ಅಂಕಗಳಿಗೆ ತಲುಪಿದೆ.

ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಶೇ.0.48 ರಷ್ಟು ಏರಿಕೆ ಕಂಡಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.18 ರಷ್ಟು ಚೇತರಿಕೆಯಾಗಿದೆ.

ವೆಬ್ದುನಿಯಾವನ್ನು ಓದಿ