ರಿಲಯನ್ಸ್ ಮಹಿಮೆ: ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

ಸೋಮವಾರ, 25 ಏಪ್ರಿಲ್ 2016 (15:02 IST)
ಕಳೆದ ವಾರ ಘೋಷಿಸಲಾದ ರಿಲಯನ್ಸ್ ಇಂಡಸ್ಟ್ರೀಸ್ ತ್ರೈಮಾಸಿಕ ಫಲಿತಾಂಶ ಚೇತರಿಕೆಯಿಂದ ಪ್ರೊತ್ಸಾಹಗೊಂಡ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ 53 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 42.24 ಪಾಯಿಂಟ್‌ಗಳ ಇಳಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 52.98 ಪಾಯಿಂಟ್‌ಗಳ ಏರಿಕೆ ಕಂಡಿದೆ. 
 
ಬಂಡವಾಳ ವಸ್ತುಗಳು, ತಂತ್ರಜ್ಞಾನ, ರಿಯಲ್ಟಿ, ಐಟಿ ಮತ್ತು ಬ್ಯಾಂಕಿಂಗ್ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿವೆ.
 
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 11.70 ಪಾಯಿಂಟ್‌ಗಳ ಕುಸಿತ ಕಂಡು 7,911 ಅಂಕಗಳಿಗೆ ತಲುಪಿದೆ.
 
ಜಪಾನ್‌‍ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.76 ರಷ್ಟು ಕುಸಿತ ಕಂಡಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.55 ರಷ್ಟು ಇಳಿಕೆಯಾಗಿದೆ. 
 
ಶಾಂಘೈ ಶೇರುಪೇಟೆ ಶೇ.1.91 ರಷ್ಟು ಇಳಿಕೆ ಕಂಡಿದೆ. ಅಮೆರಿಕದ ಡೊ ಜೊನ್ಸ್ ಶೇರುಪೇಟೆ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.12 ರಷ್ಟು ಚೇತರಿಕೆ ಕಂಡಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ