ಆರ್‌ಬಿಐನಿಂದ ರೆಪೋ ದರ ಕಡಿತ: ಪ್ರಥಮ ಬಾರಿಗೆ 30 ಸಾವಿರ ಗಡಿದಾಟಿದ ಸೂಚ್ಯಂಕ

ಬುಧವಾರ, 4 ಮಾರ್ಚ್ 2015 (14:29 IST)
ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರಗಳ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 30 ಸಾವಿರ ಅಂಕಗಳ ಗಡಿಯನ್ನು ದಾಟಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 9119.20 ಅಂಕಗಳ ಗಡಿಯನ್ನು ಪಾರು ಮಾಡಿದೆ.
 
ಬ್ಯಾಂಕಿಂಗ್ ಮತ್ತು ರಿಯಲ್ಚಿಗೆ ಸಂಬಂಧಿಸಿದ ಕ್ಷೇತ್ರದ ಶೇರುಗಳು ಸೇರಿದಂತೆ ಎಲ್ಲಾ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಶೇ.2 ರಷ್ಟು ಚೇತರಿಕೆ ಕಂಡಿವೆ. 
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ವಹಿವಾಟಿನಲ್ಲಿ ಶೇ.0.32 ರಷ್ಟು ಕುಸಿತ ಕಂಡಿದೆ. ಆದರೆ, ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಶೇ.0.66 ರಷ್ಟು ಏರಿಕೆ ಕಂಡಿದೆ.
 

ವೆಬ್ದುನಿಯಾವನ್ನು ಓದಿ