ಸೆನ್ಸೆಕ್ಸ್: 26 ಸಾವಿರ ಗಡಿ ದಾಟಿದ ಸಂವೇದಿ ಸೂಚ್ಯಂಕ

ಗುರುವಾರ, 28 ಆಗಸ್ಟ್ 2014 (13:27 IST)
ಶೇರುಪೇಟೆಯ ಸೂಚ್ಯಂಕ ಸತತ ಆರನೇ ದಿನವೂ ಚೇತರಿಕೆ ಕಂಡಿದೆ. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 82 ಪಾಯಿಂಟ್‌ಗಳ ಏರಿಕೆ ಕಂಡಿದೆ. 
 
ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 82.66 ಪಾಯಿಂಟ್‌ಗಳ ಏರಿಕೆ ಕಂಡು 26,642.81 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 28.60 ಪಾಯಿಂಟ್‌ಗಳ ಏರಿಕೆ ಕಂಡು 7964.65 ಅಂಕಗಳಿಗೆ ತಲುಪಿದೆ.
 
ಏಷ್ಯಾ ಮಾರುಕಟ್ಟೆಗಳ ಮಿಶ್ರ ಫಲಿತಾಂಶ ವಹಿವಾಟಿನ ಮಧ್ಯೆಯೂ ಜಪಾನ್ ಮತ್ತು ಹಾಂಗ್‌ಕಾಂಗ್‌ ಮಾರುಕಟ್ಟೆಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.   
 

ವೆಬ್ದುನಿಯಾವನ್ನು ಓದಿ