ಸೆನ್ಸೆಕ್ಸ್: 203 ಪಾಯಿಂಟ್‌ಗಳ ಏರಿಕೆ ಕಂಡ ಶೇರುಸೂಚ್ಯಂಕ

ಶುಕ್ರವಾರ, 20 ನವೆಂಬರ್ 2015 (13:57 IST)
ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 203 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ತೈಲ ಮತ್ತು ಅನಿಲ, ಐಟಿ ಹಾಗೂ ತಂತ್ರಜ್ಞಾನ, ವಿದ್ಯುತ್, ಗೃಹೋಪಕರಣ ವಸ್ತುಗಳು, ವಾಹನೋದ್ಯಮ, ರಿಯಲ್ಟಿ ಮತ್ತು ಉಕ್ಕು ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 359.40 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 203.44 ಪಾಯಿಂಟ್‌ಗಳ ಏರಿಕೆ ಕಂಡು 25,998.00 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 62.65 ಪಾಯಿಂಟ್‌ಗಳ ಏರಿಕೆ ಕಂಡು 7,905.40 ಅಂಕಗಳಿಗೆ ತಲುಪಿದೆ. 
 
ಗೇಲ್, ವಿಪ್ರೋ, ಎಂಆಂಡ್‌ಎಂ, ಡಾ.ರೆಡ್ಡಿ, ಟಿಸಿಎಸ್, ಹೀರೋ ಮೋಟಾರ್ ಕಾರ್ಪೋರೇಶನ್, ಮಾರುತಿ ಮತ್ತು ಬಜಾಜ್ ಅಟೋ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಲಾಭದತ್ತ ಸಾಗಿವೆ.

ವೆಬ್ದುನಿಯಾವನ್ನು ಓದಿ