ಸೆನ್ಸೆಕ್ಸ್: 242 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಸೂಚ್ಯಂಕ

ಬುಧವಾರ, 2 ಸೆಪ್ಟಂಬರ್ 2015 (14:45 IST)
ವಿದೇಶಿ ಬಂಡವಾಳ ಹೂಡಿಕೆದಾರರು ಮತ್ತು ಚಿಲ್ಲರೆ ವಹಿವಾಟುದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 242 ಪಾಯಿಂಟ್‌ಗಳ ಏರಿಕೆ ಕಂಡಿದೆ. 
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 695.94 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 242.93 ಪಾಯಿಂಟ್‌ಗಳ ಏರಿಕೆ ಕಂಡು 25,939.37 ಅಂಕಗಳಿಗೆ ತಲುಪಿದೆ.
 
ರಿಯಲ್ಟಿ, ಗೃಹೋಪಕರಣ ವಸ್ತುಗಳು ಮತ್ತು ಬಂಡವಾಳ ಕ್ಷೇತ್ರದ ಶೇರುಗಳ ವಹಿವಾಟಿನಲ್ಲಿ ಹೆಚ್ಚಳವಾಗಿದ್ದರಿಂದ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.   
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 76.70 ಪಾಯಿಂಟ್‌ಗಳ ಏರಿಕೆ ಕಂಡು 7,862.55 ಅಂಕಗಳಿಗೆ ತಲುಪಿದೆ.
 
ಐಟಿಸಿ, ಸನ್ ಫಾರ್ಮಾ, ಎಕ್ಸಿಸ್ ಬ್ಯಾಂಕ್, ಲುಪಿನ್,ಟಿಸಿಎಸ್, ರಿಲಯನ್ಸ್, ಇನ್ಫೋಸಿಸ್, ವಿಪ್ರೋ, ಎಚ್‌ಡಿಎಫ್‌ಸಿ ಲಿಮಿಟೆಡ್ ಮತ್ತು ಹಿಂಡಾಲ್ಕೋ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ಜಪಾನ್‌ನ ನಿಕೈ ಶೇರುಪೇಟೆ ಶೇ.0.79 ರಷ್ಟು ಚೇತರಿಕೆ ಕಂಡಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.99 ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ