ಸೆನ್ಸೆಕ್ಸ್: ಐಟಿ, ಬ್ಯಾಂಕಿಂಗ್ ಶೇರುಗಳ ವಹಿವಾಟು ಭರಾಟೆ

ಗುರುವಾರ, 1 ಅಕ್ಟೋಬರ್ 2015 (14:12 IST)
ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 266 ಪಾಯಿಂಟ್‌ಗಳ ಭರ್ಜರಿ ಚೇತರಿಕೆ ಕಂಡಿದೆ.
 
ಸಾಗರೋತ್ತರ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಐಟಿ, ಫಾರ್ಮಾ ಮತ್ತು ಬ್ಯಾಂಕಿಂಗ್ ಕ್ಷೇತ್ರದ ಶೇರುಗಳ ವಹಿವಾಟಿನಲ್ಲಿ ಹೆಚ್ಚಳವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಕಳೆದ ಎರಡು ದಿನಗಳ ವಹಿವಾಟಿನಲ್ಲಿ 537.99 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 266.02 ಪಾಯಿಂಟ್‌ಗಳ ಏರಿಕೆ ಕಂಡು 26,420.85 ಅಂಕಗಳಿಗೆ ತಲುಪಿದೆ. 
 
ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರಗಳಲ್ಲಿ 50 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದ್ದರಿಂದ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಜಪಾನ್‌ನ ನಿಕೈ ಶೇರುಪೇಟೆ ಶೇ.1.74 ರಷ್ಟು ಚೇತರಿಕೆ ಕಂಡಿದೆ. ಹಾಂಗ್‌ಕಾಂಗ್‌ ಮತ್ತು ಚೀನಾ ಶೇರುಪೇಟೆಗೆ ರಜೆ ಘೋಷಿಸಲಾಗಿದೆ
 

ವೆಬ್ದುನಿಯಾವನ್ನು ಓದಿ