ಸೆನ್ಸೆಕ್ಸ್: ಐತಿಹಾಸಿಕ ದಾಖಲೆ ನಿರ್ಮಿಸಿದ ಶೇರುಪೇಟೆ

ಸೋಮವಾರ, 24 ನವೆಂಬರ್ 2014 (14:48 IST)
ಜಾಗತಿಕ ಮತ್ತು ದೇಶಿಯ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ದಾಖಲೆಯ 28,514.98 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಮೊದಲ ಬಾರಿಗೆ 8500 ಅಂಕಗಳ ಗಡಿಯನ್ನು ದಾಟಿದೆ.
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 301.78 ಅಂಕಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 180.35 ಪಾಯಿಂಟ್‌ಗಳ ಏರಿಕೆ ಕಂಡು 28,514.98 ಅಂಕಗಳಿಗೆ ತಲುಪಿದೆ,
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 51.65 ಪಾಯಿಂಟ್‌ಗಳ ಏರಿಕೆ ಕಂಡು 8489.80 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.87 ಪಾಯಿಂಟ್‌ಗಳ ಏರಿಕೆ ಕಂಡಿದೆ. ಆದರೆ, ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಶೇ.0.33 ರಷ್ಟು ಕುಸಿತ ಕಂಡಿದೆ.
 
 

ವೆಬ್ದುನಿಯಾವನ್ನು ಓದಿ