ಸೆನ್ಸೆಕ್ಸ್: ಸತತ ಎರಡನೇ ದಿನವೂ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

ಮಂಗಳವಾರ, 22 ಏಪ್ರಿಲ್ 2014 (13:00 IST)
ಮುಂಬೈ: ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ 
 
ವಹಿವಾಟಿನಲ್ಲಿ ಸತತ ಎರಡನೇ ದಿನವೂ 22,853 ಅಂಕಗಳ ಗಡಿಯನ್ನು ದಾಟಿದೆ. 
 
ಬಂಡವಾಳ ವಸ್ತುಗಳು ಮತ್ತು ತೈಲ ಹಾಗೂ ಅನಿಲ ಕ್ಷೇತ್ರದ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರೆ, 
 
ಉಕ್ಕು ಮತ್ತು ವಾಹನೋದ್ಯಮ ಕ್ಷೇತ್ರದ ಶೇರುಗಳ ಮಾರಾಟಕ್ಕೆ ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ 
 
ಮೂಲಗಳು ತಿಳಿಸಿವೆ. 
 
ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 30.40 ಪಾಯಿಂಟ್‌ಗಳ ಏರಿಕೆ ಕಂಡು 22,764.83 ಅಂಕಗಳಿಗೆ 
 
ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 1.05 ಪಾಯಿಂಟ್‌ಗಳ ಏರಿಕೆ ಕಂಡು 
 
6819.30 ಅಂಕಗಳಿಗೆ ತಲುಪಿದೆ. 
 
 

ವೆಬ್ದುನಿಯಾವನ್ನು ಓದಿ