ಸೆನ್ಸೆಕ್ಸ್: 44 ಪಾಯಿಂಟ್‌ಗಳ ಅಲ್ಪ ಕುಸಿತ ಕಂಡ ಸೂಚ್ಯಂಕ

ಸೋಮವಾರ, 8 ಫೆಬ್ರವರಿ 2016 (14:17 IST)
ಏಷ್ಯಾ ಮಾರುಕಟ್ಟೆಗಳ ಮಿಶ್ರ ಫಲಿತಾಂಶದ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 44 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ393.65 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 44.41 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 7.30 ಪಾಯಿಂಟ್‌ಗಳ ಏರಿಕೆ ಕಂಡು 7,481.80 ಅಂಕಗಳಿಗೆ ತಲುಪಿದೆ.
 
ಏಷ್ಯಾ ಮಾರುಕಟ್ಟೆಗಳ ಮಿಶ್ರ ಫಲಿತಾಂಶದ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.  
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.17 ರಷ್ಟು ಇಳಿಕೆ ಕಂಡಿದೆ. ಚೀನಾ ಶಾಂಘೈ ಸೂಚ್ಯಂಕ ಮತ್ತು ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಶೇರುಪೇಟೆಗಳಿಗೆ ರಜೆ ಘೋಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ