ಸೆನ್ಸೆಕ್ಸ್: ಪಾತಾಳಕ್ಕೆ ಕುಸಿದ ಶೇರುಪೇಟೆ ಸೂಚ್ಯಂಕ

ಶುಕ್ರವಾರ, 4 ಸೆಪ್ಟಂಬರ್ 2015 (15:09 IST)
ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 400 ಪಾಯಿಂಟ್‌ಗಳ ಕುಸಿತ ಕಂಡಿದೆ. 
 
ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 421 ಪಾಯಿಂಟ್‌ಗಳ ಕುಸಿತ ಕಂಡು 25,343.94 ಅಂಕಗಳಿಗೆ ತಲುಪಿದೆ. ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟು ಕೂಡಾ ದೇಶಿಯ ಶೇರುಪೇಟೆಯ ಮೇಲೆ ಪ್ರಭಾವ ಬೀರಿದೆ ಎನ್ನಲಾಗಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 136.70 ಪಾಯಿಂಟ್‌ಗಳ ಕುಸಿತ ಕಂಡು 7,686.30 ಅಂಕಗಳಿಗೆ ತಲುಪಿದೆ.
 
ವೇದಾಂತಾ, ಟಾಟಾ ಸ್ಟೀಲ್, ಟಾಟಾ ಮೋಟಾರ್ಸ್, ಎಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಡಾ.ರೆಡ್ಡಿ, ಹಿಂಡಾಲ್ಕೋ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.
 
ಜಾಗತಿಕ ಮಾರುಕಟ್ಟೆಗಳು ಮತ್ತು ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ