ಸೆನ್ಸೆಕ್ಸ್: 145 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಸೂಚ್ಯಂಕ

ಶುಕ್ರವಾರ, 1 ಜುಲೈ 2016 (19:20 IST)
ಉತ್ಪಾದಕ ಕ್ಷೇತ್ರದ ಚೇತರಿಕೆ ಮತ್ತು ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 145 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಕಳೆದ ನಾಲ್ಕು ದಿನಗಳ ವಹಿವಾಟಿನಲ್ಲಿ 602 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಮತ್ತೆ 145 ಪಾಯಿಂಟ್‌ಗಳ ಏರಿಕೆ ಕಂಡು 27,144 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 40.60 ಪಾಯಿಂಟ್‌ಗಳ ಏರಿಕೆ ಕಂಡು 8,328 ಅಂಕಗಳಿಗೆ ತಲುಪಿದೆ.
 
ವಾರಾಂತ್ಯಕ್ಕೆ ನಿಫ್ಟಿ ಸೂಚ್ಯಂಕ 239.75 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದರೆ, ಬಿಎಸ್‌ಇ ಸೂಚ್ಯಂಕ ಶೇ.747.20 ಪಾಯಿಂಟ್‌ಗಳಿಗೆ ತಲುಪಿದೆ. ಮೇ ತಿಂಗಳ ನಂತರ ನಿಫ್ಟಿ ಮತ್ತು ಬಿಎಸ್‌ಇ ಗರಿಷ್ಠ ಚೇತರಿಕೆ ಕಂಡಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ