ಸೆನ್ಸೆಕ್ಸ್: 134 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಸಂವೇದಿ ಸೂಚ್ಯಂಕ
ಮಂಗಳವಾರ, 12 ಜುಲೈ 2016 (12:40 IST)
ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 134 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಹಣದುಬ್ಬರ ದರ ಮತ್ತು ಕೈಗಾರಿಕೆ ಉತ್ಪಾದನೆ ಸೂಚ್ಯಂಕ ಹಾಗೂ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಉಕ್ಕು, ಬ್ಯಾಂಕಿಂಗ್ ಮತ್ತು ವಿದ್ಯುತ್ ಕ್ಷೇತ್ರಗಳ ಶೇರುಗಳ ಚೇತರಿಕೆಯ ವಹಿವಾಟಿನಿಂದಾಗಿ ಬಿಎಸ್‌ಇ ಸೂಚ್ಯಂಕ 134.12 ಪಾಯಿಂಟ್‌ಗಳ ಏರಿಕೆ ಕಂಡು 27,760.81 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 35.55 ಪಾಯಿಂಟ್‌ಗಳ ಏರಿಕೆ ಕಂಡು 8,503.45 ಅಂಕಗಳಿಗೆ ತಲುಪಿದೆ.
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.2.65 ರಷ್ಟು ಏರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.43 ರಷ್ಟು ಚೇತರಿಕೆಯಾಗಿದೆ. ಚೀನಾದ ಶಾಂಘೈ ಶೇರುಪೇಟೆ ಸೂಚ್ಯಂಕ ಕೂಡಾ ಶೇ.0.03 ರಷ್ಟು ಏರಿಕೆಯಾಗಿದೆ.
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.44 ರಷ್ಟು ಏರಿಕೆ ಕಂಡಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.