ಸೆನ್ಸೆಕ್ಸ್: 71 ಪಾಯಿಂಟ್‌ಗಳ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

ಶುಕ್ರವಾರ, 17 ಅಕ್ಟೋಬರ್ 2014 (14:23 IST)
ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 71 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಹೀರೋ ಮೋಟಾರ್ ಕಾರ್ಪೋರೇಶನ್‌ನ ತ್ರೈಮಾಸಿಕ ಫಲಿತಾಂಶ ಚೇತರಿಕೆ ಕಂಡಿರುವುದು ಹೂಡಿಕೆದಾರರು ಶೇರುಗಳ ಖರೀದಿಯಲ್ಲಿ ಆಸಕ್ತಿ ತೋರುವಂತೆ ಮಾಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಕಳೆದ ಎರಡು ದಿನಗಳ ವಹಿವಾಟಿನಲ್ಲಿ 384.73 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 71.37 ಪಾಯಿಂಟ್‌ಗಳ ಏರಿಕೆ ಕಂಡು 26,070.71 ಅಂಕಗಳಿಗೆ ತಲುಪಿದೆ.
 
ಎಫ್‌ಎಂಸಿಜಿ, ವಿದ್ಯುತ್, ಬಂಡವಾಳ ವಸ್ತುಗಳು ಮತ್ತು ಹೆಲ್ತ್‌ಕೇರ್ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 13.40 ಪಾಯಿಂಟ್‌ಗಳ ಏರಿಕೆ ಕಂಡು 7761.60 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್‌ ಸೂಚ್ಯಂಕ ಶೇ.0.21 ರಷ್ಟು ಏರಿಕೆಯಾಗಿದೆ. ಏತನ್ಮಧ್ಯೆ, ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಶೇ.0.39 ರಷ್ಟು ಚೇತರಿಕೆ ಕಂಡಿದೆ.
 

ವೆಬ್ದುನಿಯಾವನ್ನು ಓದಿ