ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

ಮಂಗಳವಾರ, 28 ಜುಲೈ 2015 (14:50 IST)
ಸತತ ಮೂರು ದಿನಗಳ ವಹಿವಾಟಿನಲ್ಲಿ ಕುಸಿತ ಕಂಡಿದ್ದ ಬಿಎಸ್‌‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 100 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
 
ಏಷ್ಯಾ ಮಾರುಕಟ್ಟೆಗಳ ಮಿಶ್ರವಹಿವಾಟು ಮತ್ತು ಕೆಲ ಆಯ್ದ ಬ್ಲ್ಯೂ-ಚಿಪ್ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಮಾಸಂತ್ಯದಿಂದಾಗಿ ಹೂಡಿಕೆದಾರರು ಶೇರುಗಳ ಖರೀದಿಗೆ ನಿರಾಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಕಳೆದ ಮೂರು ದಿನಗಳ ವಹಿವಾಟಿನಲ್ಲಿ 943.55 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 100.08 ಪಾಯಿಂಟ್‌ಗಳ ಏರಿಕೆ ಕಂಡು 27,661.46 ಅಂಕಗಳಿಗೆ ತಲುಪಿದೆ.
 
ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ, ಗೃಹೋಪಕರಣ ವಸ್ತುಗಳು, ಬಂಡವಾಳ ವಸ್ತುಗಳು, ಹೆಲ್ತ್‌ಕೇರ್ ಮತ್ತು ಬ್ಯಾಂಕಿಂಗ್ ಕ್ಷೇತ್ರದ ಸೇರುಗಳು ವಹಿವಾಟಿನಲ್ಲಿ ಲಾಭಗಳಿಸಿವೆ.
 
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 30.75 ಪಾಯಿಂಟ್‌ಗಳ ಏರಿಕೆ ಕಂಡು 8,391.75 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.86 ರಷ್ಟು ಏರಿಕೆ ಕಂಡಿದ್ದರೆ, ಜಪಾನ್‌ನ ನಿಕೈ ಸೂಚ್ಯಂಕ ಶೇ.0.94 ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ