ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 147.03 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 118.07 ಪಾಯಿಂಟ್‌ಗಳ ಕುಸಿತ ಕಂಡು 28,214.17 ಅಂಕಗಳಿಗೆ ತಲುಪಿದೆ.
ಏಷ್ಯಾ ಮಾರುಕಟ್ಟೆಗಳಾದ ಹಾಂಗ್‌ಕಾಂಗ್, ದಕ್ಷಿಣ ಕೊರಿಯಾ ಮತ್ತು ತೈವಾನ್ ಶೇರುಪೇಟೆಗಳು ವಹಿವಾಟಿನ ಮುಕ್ತಾಯಕ್ಕೆ ಶೇ.0.05 ರಿಂದ ಶೇ.0.98 ರಷ್ಟು ಚೇತರಿಕೆ ಕಂಡಿದ್ದರೆ, ಚೀನಾ,ಜಪಾನ್ ಮತ್ತು ಸಿಂಗಾಪೂರ್ ಶೇರುಪೇಟೆಗಳು ಶೇ.0.17 ರಿಂದ ಶೇ.1.55 ರಷ್ಟು ಕುಸಿತ ಕಂಡಿದೆ.