ದುರ್ಬಲ ವಹಿವಾಟು: ಕುಸಿದ ಶೇರುಪೇಟೆ ಸಂವೇದಿ ಸೂಚ್ಯಂಕ

ಮಂಗಳವಾರ, 1 ಸೆಪ್ಟಂಬರ್ 2015 (14:27 IST)
ಜಿಡಿಪಿ ನಿರೀಕ್ಷಿತ ಮಟ್ಟಕ್ಕಿಂತ ಕೆಳೆಗೆ ಕುಸಿದಿರುವುದು ಮತ್ತು ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 2760 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಶೇರುಗಳನ್ನು ಹೊರತುಪಡಿಸಿ ಬ್ಯಾಂಕ್‌ಗಳು, ಬಂಡವಾಳ ವಸ್ತುಗಳು, ಗೃಹೋಪಕರಣ ವಸ್ತುಗಳು, ಉಕ್ಕು, ವಾಹನೋದ್ಯಮ, ರಿಯಲ್ಟಿ, ತೈಲ ಮತ್ತು ಅನಿಲ ಹಾಗೂ ವಿದ್ಯುತ್ ಕ್ಷೇತ್ರಗಳ ಶೇರುಗಳ ಮಾರಾಟಕ್ಕೆ ಹೂಡಿಕೆದಾರರು ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 280.54 ಪಾಯಿಂಟ್‌ಗಳ ಇಳಿಕೆ ಕಂಡು 25,984.28 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 91.90 ಪಾಯಿಂಟ್‌ಗಳ ಕುಸಿತ ಕಂಡು 7,879.40 ಅಂಕಗಳಿಗೆ ತಲುಪಿದೆ.
 
ಎಕ್ಸಿಸ್ ಬ್ಯಾಂಕ್, ಎಚ್‌ಡಿಎಫ್‌ಸಿ, ಭಾರ್ತಿ ಏರ್‌ಟೆಲ್, ಹಿಂಡಾಲ್ಕೋ, ಲುಪಿನ್ ಶೇರುಗಳು ವಹಿವಾಟಿನಲ್ಲಿ ನಷ್ಟ ಅನುಭವಿಸಿವೆ.
 
ಚೀನಾ, ಸಿಂಗಾಪೂರ್, ತೈವಾನ್, ಹಾಂಗ್‌ಕಾಂಗ್, ಜಪಾನ್, ಇಂಡೋನೇಷ್ಯಾ ಮತ್ತು ದಕ್ಷಿಣ ಕೊರಿಯಾ ಶೇರುಪೇಟೆಗಳು ಶೇ.041 ರಿಂದ ಶೇ.1.82 ರಷ್ಟು ಕುಸಿತ ಕಂಡಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ