ಸೆನ್ಸೆಕ್ಸ್: 148 ಪಾಯಿಂಟ್‌ಗಳ ಕುಸಿತ ಕಂಡ ಶೇರುಸಂವೇದಿ ಸೂಚ್ಯಂಕ

ಗುರುವಾರ, 11 ಫೆಬ್ರವರಿ 2016 (14:46 IST)
ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 148 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 858 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 148.20 ಪಾಯಿಂಟ್‌ಗಳ ಕುಸಿತ ಕಂಡು 23,610.70 ಅಂಕಗಳಿಗೆ ತಲುಪಿದೆ.  
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 29.50 ಪಾಯಿಂಟ್‌ಗಳ ಕುಸಿತ ಕಂಡು 7,186.20 ಅಂಕಗಳಿಗೆ ತಲುಪಿದೆ.
 
ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿರುವುದು ಕೂಡಾ ಶೇರುಪೇಟೆ ಇಳಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.62 ರಷ್ಟು ಕುಸಿತ ಕಂಡಿದೆ.

ವೆಬ್ದುನಿಯಾವನ್ನು ಓದಿ