ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟು: ಶೇರುಪೇಟೆ ಸೂಚ್ಯಂಕ ಕುಸಿತ

ಶುಕ್ರವಾರ, 29 ಜುಲೈ 2016 (12:25 IST)
ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 76 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಜಿಎಸ್‌ಟಿ ಮಸೂದೆ ಅಂಗೀಕಾರ ಮತ್ತು ಕಾರ್ಪೋರೇಟ್ ಕಂಪೆನಿಗಳ ತ್ರೈಮಾಸಿಕ ಫಲಿತಾಂಶ ಚೇತರಿಕೆಯ ಹಿನ್ನೆಲೆಯಲ್ಲಿ ಎರಡು ದಿನಗಳ ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 76.06 ಪಾಯಿಂಟ್‌ಗಳ ಕುಸಿತ ಕಂಡು 28,132.56 ಅಂಕಗಳಿಗೆ ತಲುಪಿದೆ.
 
ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ, ಗೃಹೋಪಕರಣ ವಸ್ತುಗಳು ಮತ್ತು ಎಫ್‌ಎಂಸಿಜಿ ಶೇರುಗಳು ವಹಿವಾಟಿನಲ್ಲಿ ಶೇ.0.29 ರಷ್ಟು ಕುಸಿತ ಕಂಡಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 23.30 ಪಾಯಿಂಟ್‌ಗಳ ಕುಸಿತ ಕಂಡು 8,643.00 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.79 ರಷ್ಟು ಕುಸಿತ ಕಂಡಿದ್ದರೆ, ಜಪಾನ್‌ನ ನಿಕೈ ಸೂಚ್ಯಂಕ ಶೇ.0.40 ರಷ್ಟು ಇಳಿಕೆ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಕೂಡಾ ಶೇ.0.05 ರಷ್ಟು ಇಳಿಕೆಯಾಗಿದೆ.
 
ಅಮೆರಿಕದ ಡೊ ಜೊನ್ಸ್  ಶೇರುಪೇಟೆ ಸೂಚ್ಯಂಕ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.09 ರಷ್ಟು ಇಳಿಕೆ ಕಂಡಿದೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ