ಸೆನ್ಸೆಕ್ಸ್: 110 ಪಾಯಿಂಟ್‌ಗಳ ಕುಸಿತ ಕಂಡ ಶೇರುಸಂವೇದಿ ಸೂಚ್ಯಂಕ

ಶುಕ್ರವಾರ, 8 ಜುಲೈ 2016 (12:47 IST)
ಮೂಲಸೌಕರ್ಯ, ಪಿಎಸ್‌ಯು ಮತ್ತು ಬಂಡವಾಳ ಕ್ಷೇತ್ರದ ಶೇರುಗಳ ವಹಿವಾಟಿನಲ್ಲಿ ಕುಂಠಿತವಾಗಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 110 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಅಮೆರಿಕದ ಜಾಬ್ ರಿಪೋರ್ಟ್ ನಾಳೆ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 34.62 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 109.54 ಪಾಯಿಂಟ್‌ಗಳ ಇಳಿಕೆ ಕಂಡು 27,091.95 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 40.40 ಪಾಯಿಂಟ್‌ಗಳ ಇಳಿಕೆ ಕಂಡು 8,297.50 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.39 ರಷ್ಟು ಕುಸಿತ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.08 ರಷ್ಟು ಇಳಿಕೆಯಾಗಿದೆ. ಶಾಂಘೈ ಶೇರುಪೇಟೆ ಶೇ.0.79 ರಷ್ಟು ಕುಸಿತ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.13 ರಷ್ಟು ಕುಸಿತಗೊಂಡಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ