ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 226.89 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 108.55 ಪಾಯಿಂಟ್‌ಗಳ ಇಳಿಕೆ ಕಂಡು 27,873.16 ಅಂಕಗಳಿಗೆ ತಲುಪಿದೆ.
ಎಫ್‌ಎಂಸಿಜಿ, ತೈಲ ಮತ್ತು ಅನಿಲ, ರಿಯಲ್ಟಿ, ವಿದ್ಯುತ್, ಮೂಲಸೌಕರ್ಯ, ಬ್ಯಾಂಕಿಂಗ್ ಮತ್ತು ಹೆಲ್ತ್‌ಕೇರ್ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಶೇ.0.60 ರಷ್ಟು ನಷ್ಟ ಅನುಭವಿಸಿವೆ.
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.86 ರಷ್ಟು ಇಳಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.70 ರಷ್ಟು ಇಳಿಕೆಯಾಗಿದೆ. ಆದರೆ, ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.04 ರಷ್ಟು ಚೇತರಿಕೆ ಕಂಡಿದೆ.