ಸೆನ್ಸೆಕ್ಸ್: 11 ತಿಂಗಳ ಗರಿಷ್ಠ ಕುಸಿತ ಕಂಡ ಸಂವೇದಿ ಸೂಚ್ಯಂಕ

ಮಂಗಳವಾರ, 26 ಜುಲೈ 2016 (19:58 IST)
ಹೂಡಿಕೆದಾರರು ಶೇರುಗಳ ಖರೀದಿಗೆ ಕಾದುನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 119 ಪಾಯಿಂಟ್‌ಗಳ ಕುಸಿತ ಕಂಡಿದೆ. ನಿಫ್ಟಿ ಕೂಡಾ ಚೇತರಿಕೆ ಕಾಣುವಲ್ಲಿ ವಿಫಲವಾಗಿದೆ. 
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 118.82 ಪಾಯಿಂಟ್‌ಗಳ ಏರಿಕೆ ಕಂಡು 28,121.37 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 45 ಪಾಯಿಂಟ್‌ಗಳ ಕುಸಿತ ಕಂಡು 8,590.65 ಅಂಕಗಳಿಗೆ ತಲುಪಿದೆ. 
 
ಬಿಎಸ್‌ಇ ಸ್ಮಾಲ್ ಕ್ಯಾಪ್ ಶೇ.0.69 ರಷ್ಟು ಕುಸಿತ ಕಂಡಿದ್ದರೆ, ಮಿಡ್ ಕ್ಯಾಪ್ ಶೇ.0.17 ರಷ್ಟು ಇಳಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ಶೇ.1.43 ರಷ್ಟು ಇಳಿಕೆ ಕಂಡಿದೆ. ಆದರೆ, ಚೀನಾ, ಹಾಂಗ್‌ ಕಾಂಗ್‌, ಸಿಂಗಾಪೂರ್, ದಕ್ಷಿಣ ಕೊರಿಯಾ ಮತ್ತು ತೈವಾನ್ ಶೇರುಪೇಟೆಗಳು ವಹಿವಾಟಿನಲ್ಲಿ ಶೇ.1.14 ರಷ್ಟು ಚೇತರಿಕೆ ಕಂಡಿವೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ