ಸೆನ್ಸೆಕ್ಸ್: ಪಾತಾಳಕ್ಕೆ ಕುಸಿದ ಶೇರುಪೇಟೆ ಸೂಚ್ಯಂಕ

ಗುರುವಾರ, 23 ಏಪ್ರಿಲ್ 2015 (19:19 IST)
ಕೇಂದ್ರ ಸರಕಾರದ ತೆರಿಗೆ ನೀತಿ ಪದ್ದತಿಗಳು ವಿದೇಶಿ ಹೂಡಿಕೆದಾರರನ್ನು ಆಕರ್ಷಿಸಲು ವಿಫಲವಾದ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 155 ಪಾಯಿಂಟ್‌ಗಳ ಕುಸಿತ ಕಂಡು 27,735.02 ಅಂಕಗಳಿಗೆ ತಲುಪಿದೆ.

ನಾಳೆ ಸಾಫ್ಟ್‌ವೇರ್ ಕಂಪೆನಿಯಾದ ಇನ್ಫೋಸಿಸ್ ತ್ರೈಮಾಸಿಕ ಫಲಿತಾಂಶ ಹೊರಬೀಳುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನ ಮಧ್ಯೆಯು ಶೇರುಸೂಚ್ಯಂಕ 27,977.27 ಅಂಕಗಳಿಗೆ ತಲುಪಿ 28 ಸಾವಿರ ಗಡಿ ದಾಟುವಲ್ಲಿ ವಿಫಲವಾಗಿದೆ.

ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಅಂತ್ಯಕ್ಕೆ 155.11 ಪಾಯಿಂಟ್‌ಗಳ ಕುಸಿತ ಕಂಡು 27,735.02 ಅಂಕಗಳಿಗೆ ತಲುಪಿದೆ.

ವೆಬ್ದುನಿಯಾವನ್ನು ಓದಿ