ಸೆನ್ಸೆಕ್ಸ್: 33 ಪಾಯಿಂಟ್‌ಗಳ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ

ಮಂಗಳವಾರ, 5 ಜುಲೈ 2016 (12:56 IST)
ಏಷ್ಯಾ ಮಾರುಕಟ್ಟೆಗಳ ಮಿಶ್ರವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 33 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಕಳೆದ ಆರು ದಿನಗಳ ವಹಿವಾಟಿನಲ್ಲಿ 881 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 33.44 ಪಾಯಿಂಟ್‌ಗಳ ಕುಸಿತ ಕಂಡು 27,245.32 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 19.50 ಪಾಯಿಂಟ್‌ಗಳ ಇಳಿಕೆ ಕಂಡು 8,351.20 ಅಂಕಗಳಿಗೆ ತಲುಪಿದೆ.
 
ಬಜಾಜ್ ಅಟೋ, ಗೇಲ್, ಎನ್‌‍ಟಿಪಿಸಿ, ಟಾಟಾ ಮೋಟಾರ್ಸ್, ಭಾರ್ತಿ ಏರ್‌ಟೆಲ್, ಹೀರೋ ಮೋಟಾರ್ ಕಾರ್ಪೋರೇಶನ್, ಪವರ್ ಗ್ರಿಡ್, ಇನ್ಫೋಸಿಸ್, ಎಕ್ಸಿಸ್ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್, ಏಷ್ಯನ್ ಪೇಂಟ್ಸ್ ಟಿಸಿಎಸ್, ವಿಪ್ರೋ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.
 
ಜಪಾನ್‌ನ ನಿಕೈ ಸೂಚ್ಯಂಕ ಶೇ.0.87 ರಷ್ಟು ಕುಸಿತ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.82 ರಷ್ಟು ಇಳಿಕೆಯಾಗಿದೆ. ಆದರೆ,ಶಾಂಘೈ ಶೇರುಪೇಟೆ ಶೇ.0.23 ರಷ್ಟು ಚೇತರಿಕೆ ಕಂಡಿದೆ.
 
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಅಮೆರಿಕದ ಶೇರುಪೇಟೆಗೆ ಸಾರ್ವಜನಿಕ ರಜೆ ಘೋಷಿಸಲಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ