ಕೈಗಾರಿಕೆ ವೃದ್ಧಿ ದರ ಸೂಚ್ಯಂಕ ಕುಸಿತ: ಸೆನ್ಸೆಕ್ಸ್ ಇಳಿಕೆ

ಮಂಗಳವಾರ, 16 ಆಗಸ್ಟ್ 2016 (20:12 IST)
ಕೈಗಾರಿಕೆ ವೃದ್ಧಿ ದರ ಸೂಚ್ಯಂಕ ಕುಸಿತ ಕಂಡ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 88 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 377.52 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 87.79 ಪಾಯಿಂಟ್‌ಗಳ ಇಳಿಕೆ ಕಂಡು 28,190.04 ಅಂಕಗಳಿಗೆ ತಲುಪಿದೆ.  
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 29.60 ಪಾಯಿಂಟ್‌ಗಳ ಕುಸಿತ ಕಂಡು 8,642.55 ಅಂಕಗಳಿಗೆ ತಲುಪಿದೆ.
 
ಚೀನಾ, ಹಾಂಗ್‌ಕಾಂಗ್‌, ಸಿಂಗಾಪೂರ್, ದಕ್ಷಿಣ ಕೊರಿಯಾ ಮತ್ತು ತೈವಾನ್ ಶೇರುಪೇಟೆಗಳು ವಹಿವಾಟಿನ ಮುಕ್ತಾಯಕ್ಕೆ ಶೇ.0.09 ರಿಂದ ಶೇ.0.49 ರಷ್ಟು ಕುಸಿತ ಕಂಡಿದೆ.
 
ಸನ್‌ ಫಾರ್ಮಾ, ಟಾಟಾ ಮೋಟಾರ್ಸ್, ಟಿಸಿಎಸ್, ವಿಪ್ರೋ, ಎಚ್‌ಡಿಎಫ್‌ಸಿ, ಎಕ್ಸಿಸ್ ಬ್ಯಾಂಕ್, ಭಾರ್ತಿ ಏರ್‌ಟೆಲ್, ಮಾರುತಿ, ಆರ್‌ಐಎಲ್ ಶೇರುಗಳು ವಹಿವಾಟಿನಲ್ಲಿ ನಷ್ಟ ಅನುಭವಿಸಿವೆ. 
 
ಏತನ್ಮಧ್ಯೆ, ಸಿಪ್ಲಾ, ಆದಾನಿ ಪೋರ್ಟ್ಸ್, ಎಸ್‌ಬಿಐ, ಟಾಟಾ ಸ್ಟೀಲ್, ಎಲ್‌ಆಂಡ್‌ಟಿ, ಐಸಿಐಸಿಐ ಬ್ಯಾಂಕ್ ಮತ್ತು ಓಎನ್‌ಜಿಸಿ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ