ಸೆನ್ಸೆಕ್ಸ್: 27 ಸಾವಿರಕ್ಕಿಂತಲು ಕೆಳಗೆ ಕುಸಿದ ಸಂವೇದಿ ಸೂಚ್ಯಂಕ

ಸೋಮವಾರ, 15 ಸೆಪ್ಟಂಬರ್ 2014 (14:56 IST)
ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನ ಮಧ್ಯೆ ಕೈಗಾರಿಕೆ ವೃದ್ಧಿ ದರ ಕುಸಿತ ಕಂಡಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 185 ಪಾಯಿಂಟ್‌ಗಳ ಭಾರಿ ಕುಸಿತ ಕಂಡಿದೆ.
 
ಎಫ್‌ಎಂಸಿಜಿ, ವಿದ್ಯುತ್, ಬಂಡವಾಳ ವಸ್ತುಗಳು ಮತ್ತು ಐಟಿ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಇಳಿಕೆಯಾಗಿದ್ದರಿಂದ ಮಾರುಕಟ್ಟೆ ಸೂಚ್ಯಂಕ ಕುಸಿದಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 65.17 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 185.55 ಪಾಯಿಂಟ್‌ಗಳ ಇಳಿಕೆಯಾಗಿ 26,875.49 ಅಂಕಗಳಿಗೆ ತಲುಪಿದೆ. 
 
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 70.95 ಪಾಯಿಂಟ್‌ಗಳ  ಕುಸಿತವಾಗಿ 8,0334.55 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.75 ರಷ್ಟು ಕುಸಿತವಾಗಿದೆ. ಜಪಾನ್‌ನ ನಿಕೈ ಮಾರುಕಟ್ಟೆಗೆ ಇಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ.
 

ವೆಬ್ದುನಿಯಾವನ್ನು ಓದಿ