ಮೂರು ತಿಂಗಳ ಕನಿಷ್ಠ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ

ಸೋಮವಾರ, 17 ಅಕ್ಟೋಬರ್ 2016 (19:59 IST)
ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 144 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಟಿಸಿಎಸ್ ಮತ್ತು ಇನ್ಫೋಸಿಸ್ ಎರಡನೇ ತೈಮ್ರಾಸಿಕ ಫಲಿತಾಂಶ ಕುಸಿತ ಕಂಡ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಮಾರಾಟಕ್ಕೆ ಮುಂದಾಗಿದ್ದರಿಂದ ಶೇರುಪೇಟೆ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. 
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 30 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 143.65 ಪಾಯಿಂಟ್‌ಗಳ ಇಳಿಕೆ ಕಂಡು 27,529.97 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 63 ಪಾಯಿಂಟ್‌ಗಳ ಕುಸಿತ ಕಂಡು 8,520.40 ಅಂಕಗಳಿಗೆ ತಲುಪಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ