ಸೆನ್ಸೆಕ್ಸ್: ಭಾರಿ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

ಬುಧವಾರ, 27 ಆಗಸ್ಟ್ 2014 (12:23 IST)
ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 142 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಕಳೆದ ನಾಲ್ಕು ದಿನಗಳ ವಹಿವಾಟಿನ ಮುಕ್ತಾಯಕ್ಕೆ 128 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 142.51 ಪಾಯಿಂಟ್‌ಗಳ ಏರಿಕೆ ಕಂಡು 26,585.32 ಅಂಕಗಳಿಗೆ ತಲುಪಿದೆ.  
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 39.80 ಪಾಯಿಂಟ್‌ಗಳ ಏರಿಕೆಯಾಗಿ 7944.55 ಅಂಕಗಳಿಗೆ ತಲುಪಿದೆ.
 

ವೆಬ್ದುನಿಯಾವನ್ನು ಓದಿ