ಸೆನ್ಸೆಕ್ಸ್: 231 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ
ಶುಕ್ರವಾರ, 5 ಆಗಸ್ಟ್ 2016 (13:04 IST)
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಮತ್ತು ಕೆಲ ಆಯ್ದ ಬ್ಲ್ಯೂ-ಚಿಪ್ ಶೇರುಗಳು ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 231 ಪಾಯಿಂಟ್‌ಗಳ ಏರಿಕೆ ಕಂಡಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 8600 ಅಂಶಗಳ ಗಡಿ ದಾಟಿದೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 16.86 ಪಾಯಿಂಟ್‌ಗಳ ಏರಿಕೆಯೊಂದಿಗೆ ಮುಕ್ತಾಯವಾಗಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 213.03 ಪಾಯಿಂಟ್‌ಗಳ ಕುಸಿತ ಕಂಡು 27,945.40 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 78.15 ಪಾಯಿಂಟ್‌ಗಳ ಏರಿಕೆ ಕಂಡು 8,629.25 ಅಂಕಗಳಿಗೆ ತಲುಪಿದೆ.
ಹಾಂಗ್‌ಕಾಂಗ್ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.31 ರಷ್ಟು ಏರಿಕೆ ಕಂಡಿದ್ದರೆ, ಜಪಾನ್‌ನ ನಿಕೈ ಸೂಚ್ಯಂಕ ಶೇ.0.28 ರಷ್ಟು ಚೇತರಿಕೆ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.20 ರಷ್ಟು ಏರಿಕೆ ಕಂಡಿದೆ.
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.02 ರಷ್ಟು ಕುಸಿತ ಕಂಡಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.