ಸೆನ್ಸೆಕ್ಸ್: 100 ಪಾಯಿಂಟ್‌ಗಳ ಭರ್ಜರಿ ಚೇತರಿಕೆ ಕಂಡ ಶೇರುಸೂಚ್ಯಂಕ
ಬುಧವಾರ, 13 ಜುಲೈ 2016 (12:18 IST)
ಧನಾತ್ಮಕ ಮ್ಯಾಕ್ರೋಎಕಾನಾಮಿಕ್ ಡೇಟಾ ಫಲಿತಾಂಶದಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 121 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟು ಮತ್ತು ಅಮೆರಿಕ ಶೇರುಪೇಟೆಯ ಭರ್ಜರಿ ವಹಿವಾಟಿನಿಂದಾಗಿ ಹೂಡಿಕೆದಾರರು ಶೇರುಗಳು ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 681.24 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 120.62 ಪಾಯಿಂಟ್‌ಗಳ ಏರಿಕೆ ಕಂಡು 27,928.76 ಅಂಕಗಳಿಗೆ ತಲುಪಿದೆ.
ಉಕ್ಕು, ತೈಲ ಮತ್ತು ಅನಿಲ, ಪಿಎಸ್‌ಯು ಮತ್ತು ವಿದ್ಯುತ್ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 29.20 ಪಾಯಿಂಟ್‌ಗಳ ಏರಿಕೆ ಕಂಡು 8,550.25 ಅಂಕಗಳಿಗೆ ತಲುಪಿದೆ.
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.1.0 ರಷ್ಟು ಚೇತರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.47 ರಷ್ಟು ಚೇತರಿಕೆ ಕಂಡಿದೆ. ಚೀನಾದ ಶಾಂಘೈ ಶೇರುಪೇಟೆ ಶೇ.0.29 ರಷ್ಟು ಏರಿಕೆ ಕಂಡಿದೆ.
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.66 ರಷ್ಟು ಏರಿಕೆ ಕಂಡಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.